ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಕರ್ನಾಟಕದ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಆದರೆ ರಾಜ್ಯಪಾಲರ ನಡೆಯನ್ನು ಸಿಎಂ ಸಿದ್ದರಾಮಯ್ಯ ನಿರೀಕ್ಷೆ ಮಾಡಿದ್ದರೆಂದು ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ
ಈ ಕುರಿತು ಮಾತನಾಡಿರುವ ಅವರು, ರಾಜ್ಯಪಾಲರ ಈ ನಡೆಯನ್ನು ನಾನು ಇರೀಕ್ಷೆ ಮಾಡಿದ್ದೆ. ಏಕೆಂದರೆ ಪ್ರಕರಣದ ಕುರಿತು ಸಂಪೂರ್ಣ ವಿವರಣೆ ನೀಡಿದ ಬಳಿಕವೂ ರಾಜ್ಯಪಾಲರು ನೋಟಿಸ್ ನೀಡಿದ್ದ ಕಾರಣ ಪ್ರಾಸಿಕ್ಯೂಷನ್ಗೆ ಅನುಮತಿ ನೀಡ್ತಾರೆ ಅಂತ ನಿರೀಕ್ಷೆ ಇತ್ತು ಎಂದು ಹೇಳಿದ್ದಾರೆ.
ಮುಡಾ ಬದಲಿ ಸೈಟ್ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿದ ನೀಡಿದ ಬೆನ್ನಲ್ಲೇ ಸಿಎಂ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಿದ್ದು, ಲೀಗಲ್ ಟೀಮ್ ಜೊತೆ ಸತತ ಸಮಾಲೋಚನೆ ನಡೆಸಿದ್ದಾರೆ.
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಎರಡು ಪ್ರತ್ಯೇಕ ದೂರು ಸಲ್ಲಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೊರೆ ಹೋಗುವ ತೀರ್ಮಾನ ಮಾಡಿದ್ದಾರೆ. ಕೋರ್ಟ್ ನಲ್ಲಿ ಪ್ರಾಸಿಕ್ಯೂಷನ್ ಅನುಮತಿ ರದ್ದು ಕೋರಿ ಮನವಿ ಮಾಡಲಿದ್ದಾರೆ.ಎನ್ನಲಾಗಿದೆ.