ಶಿವಮೊಗ್ಗ:- ಹೆಚ್ಚುವರಿ ಡಿಸಿಎಂ ನೇಮಕದ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಈ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಗೆ ಹೇಗೆ ಸಹಕಾರಿಯಾಗಲಿವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದೊಂದಿಗೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಆದರೆ, ನಾವು ಈ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರ ಅಭಿವೃದ್ಧಿ ಮಾಡಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಮತಬ್ಯಾಂಕ್ ಗಾಗಿ ಜಾರಿ ಮಾಡಿಲ್ಲ” ಎಂದು ಹೇಳಿದರು.