ಯಾದಗಿರಿ: ಯಾದಗಿರಿ ತಾಲೂಕಿನ ಬೊಮ್ಮರಾಲದೊಡ್ಡಿಯಲ್ಲಿ ತಮ್ಮನಿಂದಲೇ ಅಕ್ಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ನರಸಮ್ಮ(65) ಕೊಲೆಯಾದ ಸಹೋದರಿಯಾಗಿದ್ದು, ಮಾನಸಿಕ ಅಸ್ವಸ್ಥನಾಗಿದ್ದ ತಮ್ಮನಿಂದ ಸಹೋದರಿಯ ಕೊಲೆಯಾಗಿದೆ. ಮಾನಸಿಕ ಅಸ್ವಸ್ಥನಾಗಿದ್ದ ಸೂಗುರಪ್ಪನನ್ನು ನಸರಮ್ಮಳೇ ನೋಡಿಕೊಳ್ಳುತ್ತಿದ್ದರು. ಇನ್ನೂ ಮನೆಯಲ್ಲಿ ಕೈ-ಕಾಲು ಕಟ್ಟಿ ಕೂರಿಸುತ್ತಿದ್ದರು. ಕೋಪದಲ್ಲಿ ಸರಪಳಿ ಬಿಚ್ಚಿಕೊಂಡು ಕಬ್ಬಿಣ್ಣದ ಸುತ್ತಿಗೆಯಿಂದ ಹೆಂಡತಿಗೆ ಹಾಗೂ ಸಹೋದರಿಗೆ ನರಸಮ್ಮನಿಗೆ ಹೊಡೆದಿದ್ದಾನೆ.
ನರಸಮ್ಮ ಈತನಿಂದ ತಪ್ಪಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಆದರೂ ಬಿಡದ ಸೂಗುರಪ್ಪ ನಡು ರಸ್ತೆಯಲ್ಲಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದೆ. ಇನ್ನೂ ರಸ್ತೆಯಲ್ಲಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ