– ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಬೈಕ್ವೊಂದನ್ನು ನಕಲಿ ಕೀ ಬಳಿಸಿ ಕಳ್ಳತನ ಮಾಡಿರುವ ಘಟನೆ ಜರುಗಿದೆ.
ಬ್ಯಾಂಕ್ವೊಂದರ ಮುಂದೆ ಬೈಕ್ ನಿಲ್ಲಿಸಿ ಗ್ರಾಹಕ ಬ್ಯಾಂಕ್ನಲ್ಲಿ ತನ್ನ ಕೆಲಸ ಮುಗಿಸಿಬರಲು ಹೋಗಿದ್ದ. ವಾಪಸ್ ಬರುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಬೈಕ್ ಇಲ್ಲದ್ದನ್ನ ಕಂಡು ಬೈಕ್ ಸವಾರ ಕಂಗಾಲಾಗಿದ್ದಾನೆ.
ನಕಲಿ ಕೀ ಬಳಿಸಿ, ಬೈಕ್ ಹ್ಯಾಂಡಲ್ ಲಾಕ್ ತೆಗೆದು ಬೈಕ್ ಕಳ್ಳತನ ಮಾಡಿಕೊಂಡು ಕ್ಷಣಾರ್ಧದಲ್ಲಿ ಖದೀಮ ಎಸ್ಕೇಪ್ ಆಗಿದ್ದಾನೆ. ಬೈಕ್ ಕಳ್ಳತನ ಮಾಡಿದ ಕಳ್ಳತನದ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಹಕನ ಚಲನವಲನ ಕಂಡು ಬೈಕ್ ಕಳ್ಳತನ ಮಾಡಿದ್ದಾನೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ
ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.