ವಿಶ್ವದ ಅತಿ ಸಿರಿವಂತ ದೇವರು ಎಂಬ ಹೆಗ್ಗಳಿಕೆ ಹೊಂದಿರುವ ( Tirupati Temple) ತಿರುಪತಿ ತಿಮ್ಮಪ್ಪನಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಮೂರು ಕೋಟಿ ರೂಪಾಯಿಗಳ ದಂಡ ವಿಧಿಸಿದೆ. ಈ ದಂಡವನ್ನು ಈಗಾಗಲೇ ಪಾವತಿಸಲಾಗಿದೆ ಎಂದು ದೇವಾಲಯದ ಮೂಲಗಳು ಖಚಿತಪಡಿಸಿವೆ.
ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಾಗ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ 10 ಕೋಟಿ ರೂಪಾಯಿಗಳ ದಂಡ ವಿಧಿಸಲಾಗಿದ್ದು, ಮಾತುಕತೆ ಬಳಿಕ ಇದನ್ನು ಮೂರು ಕೋಟಿ ರೂಪಾಯಿಗಳಿಗೆ ನಿಗದಿಪಡಿಸಲಾಗಿತ್ತು.
ವಿದೇಶಿ ಭಕ್ತರು ನೀಡುವ ಕೊಡುಗೆಗಳನ್ನು ಭಾರತೀಯ ಕರೆನ್ಸಿಗೆ ಪರಿವರ್ತನೆ ಮಾಡುವ ಸಂದರ್ಭದಲ್ಲಿ ವ್ಯತ್ಯಾಸವಾಗಿತ್ತು ಎನ್ನಲಾಗಿದ್ದು, ಅಲ್ಲದೆ ಇದನ್ನು ಖರ್ಚು ಮಾಡಿದ ರೀತಿಗೂ ಕೇಂದ್ರ ಗೃಹ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ 3 ಕೋಟಿ ರೂಪಾಯಿಗಳ ದಂಡವನ್ನು ಪಾವತಿಸಲಾಗಿದೆ.