ವಿಧಾನಪರಿಷತ್ : ಮಂಗಳವಾರದ ನಡೆದ ಕಲಾಪದಲ್ಲಿ ಬೆಳೆ ನಷ್ಟವಾದ ರೈತರಿಗೆ ಸೂಕ್ತ ಪರಿಹಾರ ಧನ ನೀಡದಿರುವ ಕುರಿತಂತೆ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವರಲ್ಲಿ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಪ್ರಶ್ನೆ ಮಾಡಿದರು,
ಈ ಬಗ್ಗೆ ಸರಕಾರ ಕೊಟ್ಟಿರುವ ಉತ್ತರದಲ್ಲಿ ಒಂದೊಂದು ಎಕರೆಗೆ ಒಂದೊಂದು ದರ ನಿಗದಿ ಆಗಿದೆ. 5ಲಕ್ಷ 11ಸಾವಿರದ 208 ಎಕರೆ ಪ್ರದೇಶದ ಇಡೀ ತೋಟಗಾರಿಕೆ ಬೆಳೆ ನಾಶ ಆಗಿದೆ.
ಎನ್.ಡಿ.ಆರ್.ಆಫ್ ನಿಗದಿ ಮಾಡಿರುವ ಥರ ಮಳೆಯಾಶ್ರಿತ ತೋಟಗಾರಿಕೆ ಬೆಳೆಗೆ 8500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ, ಬಹುವಾರ್ಷಿಕ ಬೆಳೆಗೆ 22500 ರೂಪಾಯಿ ನಿಗದಿ ಆಗಿದೆ.
ಆದರೆ ಈ ಅಮಾನವೀಯ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ. ರೈತರಿಗೆ ಭಿಕ್ಷೆ ಎಂಬಂತೆ ಕೇವಲ ಒಬ್ಬೊಬ್ಬರಿಗೆ 2ಸಾವಿರ ರೂಪಾಯಿ ನೀಡಿದೆ.
ಭಾಗ್ಯಗಳನ್ನು ನೀಡಿ ಸರ್ಕಾರದ ಬೊಕ್ಕಸದ ಹಣವನ್ನು ಗ್ಯಾರೆಂಟಿಯ ಮೇಲೆ ಖಾಲಿ ಮಾಡಿ, ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕೆಂದು, ಸಚಿವರಲ್ಲಿ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಒತ್ತಾಯ ಮಾಡಿದರು.