ಇಂದಿನಿಂದ ಭಾರತ ವಿರುದ್ಧ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯವಾಡಲು ಎದುರು ನೋಡುತ್ತಿರುವ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಅಜಿಂಕ್ಯ ರಹಾನೆ ತಲೆ ನೋವಾಗಿ ಪರಿಣಮಿಸಿದ್ದಾರೆ. ಇದಕ್ಕೆ ಬಲವಾದ ಕಾರಣವೇನೆಂದು ಇಲ್ಲಿ ವಿವರಿಸಲಾಗಿದೆ.
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಕೆಲ ಬದಲಾವಣೆ ಹೊರತುಪಡಿಸಿ ಇನ್ನುಳಿದಂತೆ ಬಹುತೇಕ ಅದೇ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್, ಮೂರನೇ ಸ್ಥಾನದಲ್ಲಿ ಚೇತೇಶ್ವರ್ ಪೂಜಾರ, ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಮತ್ತು ಐದನೇ ಸ್ಥಾನದಲ್ಲಿ ಅಜಿಂಕ್ಯ ರಹಾನೆ ಆಡುವುದು ಬಹುತೇಕ ಖಚಿತ.
ಬರೋಬ್ಬರಿ 15 ತಿಂಗಳ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿರುವ ರಹಾನೆ, ಡಬ್ಲ್ಯುಟಿಸಿ ಫೈನಲ್ನಲ್ಲಿ ಆಡುವಂತೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಈಗಾಗಲೇ ಸೂಚನೆ ನೀಡಿದ್ದಾರೆ. ತವರು ನೆಲಕ್ಕಿಂತ ವಿದೇಶಿ ನೆಲದಲ್ಲಿ ಅಜಿಂಕ್ಯ ರಹಾನೆ ಅತ್ಯುತ್ತಮ ಟೆಸ್ಟ್ ಕ್ರಿಕೆಟ್ ದಾಖಲೆ ಹೊಂದಿದ್ದಾರೆ.