ಬೆಂಗಳೂರು;- ಉನ್ನತ ಸ್ಥಾನದಲ್ಲಿರುವವರು ಇತಿಮಿತಿಯಲ್ಲಿ ಮಾತನಾಡಬೇಕು ಎಂದು ಹೈಕೋರ್ಟ್ ಹೇಳಿದೆ.
ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಗೆ ಪಠ್ಯ ಕ್ರಮಕ್ಕೆ ಕನ್ನಡ ಭಾಷೆ ಬೋಧನೆ ಕಡ್ಡಾಯ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಎಂಟು ಮಂದಿ ವಿದ್ಯಾರ್ಥಿಗಳ ಪೋಷಕರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆಭಿಪ್ರಾಯಪಟ್ಟಿತು.
ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು, ನಾನೂ ಸಹಾ ಪ್ರಾದೇಶಿ ಭಾಷೆಯಲ್ಲಿ ಅಧ್ಯಯನ ಮಾಡಿದ್ದೇನೆ. ನನ್ನ ಸಾಧನೆಗೆ ಎಂದಿಗೂ ಭಾಷೆ ಅಡ್ಡಿಯಾಗಲಿಲ್ಲ. ಆದರೂ ನ್ಯಾಯಾಲಯ ಕಾನೂನಿನ ಅಂಶಗಳಡಿಯಲ್ಲಿ ಪರಿಗಣಿಸಿ ಪರಿಹಾರ ಕಂಡುಕೊಳ್ಳಬೇಕು. ಜೊತೆಗೆ, ಈ ರೀತಿಯ ವಿಚಾರಗಳಲ್ಲಿ ಉನ್ನತ ಸ್ಥಾನದಲ್ಲಿರುವವರು ಇತಿಮಿತಿಯಲ್ಲಿ ಮಾತನಾಡಬೇಕು ಎಂದು ಹೇಳಿದರು.