ಬೆಂಗಳೂರು:- ಚುನಾವಣಾ ಅಕ್ರಮಗಳ ಸರಮಾಲೆ ಸಂಬಧ ಬಿಜೆಪಿ ನಿಯೋಗದಿಂದ ಆಯೋಗಕ್ಕೆ ಮೂರು ದೂರು ಸಲ್ಲಿಕೆ ಮಾಡಲಾಗಿದೆ. ಬಿಜೆಪಿ ಕಾನೂನು ವಿಭಾಗದ ಮುಖ್ಯಸ್ಥ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ಚುನಾವಣಾ ಆಯೋಗಕ್ಕೆ ಸೋಮವಾರ ಮೂರು ದೂರು ಸಲ್ಲಿಸಿದೆ.
ಭಾನುವಾರ ಬಳ್ಳಾರಿಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಗಿತ್ತು. ಈ ವೇಳೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ನೀತಿಸಂಹಿತೆ ಉಲ್ಲಂಘಿಸಲಾಗಿದೆ ಎಂದು ಬಿಜೆಪಿ ನಿಯೋಗ ದೂರು ನೀಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಸುಧಾಕರ್ ಉಲ್ಲೇಖಿಸಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದೆ
ಕಳೆದ ಬಾರಿ 5 ಕೆಜಿ ಅಕ್ಕಿ ಕೊಡ್ತಿದ್ದೆ ಎಂದು ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಬಿಜೆಪಿ ದೂರು ನೀಡಿದೆ. ಚುನಾವಣಾ ಅಖಾಡದಲ್ಲಿ ಕುರುಡು ಕಾಂಚಾಣ ಭಾರಿ ಸದ್ದು ಮಾಡ್ತಿದೆ. ಇದಕ್ಕೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ.