ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರದಲ್ಲೂ ಕೂಡ ಗುಡುಗು ಸಹಿತ ಭಾರೀ ಮಳೆಯಾಗಬಹುದು.
ಉತ್ತರ ಒಳನಾಡಿನ ಬೀದರ್, ಕಲಬುರಗಿ ಜಿಲ್ಲೆಯಲ್ಲೂ ಮಳೆ ಸಂಭವವಿದ್ದು, ತಗ್ಗುಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.