ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಕಲುಷಿತ ನೀರು ಸೇವನೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಇದಲ್ಲದೇ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಲ್ಲಾವರಂ ನಗರದಲ್ಲಿ ಮಳೆಯಿಂದಾಗಿ ಕೊಳಚೆ ನೀರು ಸೇರಿಕೊಂಡು ಕುಡಿಯುವ ನೀರು ಕಲುಷಿತಗೊಂಡಿದೆ ಎಂದು ಸ್ಥಳೀಯ ಆರೋಪಿಸಿದ್ದಾರೆ.
ಇನ್ನೂ ತಮಿಳುನಾಡು ಆರೋಗ್ಯ ಸಚಿವ ಸುಬ್ರಮಣಿಯಮ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಾಂತ್ವನ ಹೇಳಿದರು. ನೀರಿನ ಮಾದರಿಗಳನ್ನು ವಿವರವಾಗಿ ವಿಶ್ಲೇಷಿಸಲಾಗುತ್ತಿದೆ, ಆ ನೀರನ್ನು ಕಿಂಗ್ ಇನ್ಸ್ಟಿಟ್ಯೂಟ್ ಆಫ್ ಪ್ರಿವೆಂಟಿವ್ ಮೆಡಿಸಿನ್ ಮತ್ತು ರಿಸರ್ಚ್ಗೆ ಕಳುಹಿಸಲಾಗಿದೆ.
ಮರಣೋತ್ತರ ಪರೀಕ್ಷೆಯ ರಿಪೋರ್ಟ್ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದರು. ಪಲ್ಲಾವರಂನ ಕಾಮರಾಜ್ ನಗರ ಮತ್ತು ಮನಲ್ಮೇಡು ನಿವಾಸಿಗಳು ಕಳೆದ ಮೂರು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ತಾಂಬರಂನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಒಟ್ಟು 34 ವ್ಯಕ್ತಿಗಳು ದಾಖಲಾಗಿದ್ದು, 14 ಮಂದಿ ಡಿಸ್ಚಾರ್ಜ್ ಆಗಿದ್ದು, 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.