ಬೆಂಗಳೂರು: ನಿವೇಶನ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.
ಪತಿ ಮಹಮ್ಮದ್ ಜಾವಿದ್(47), ಪತ್ನಿ ನಸೀಮ್ ತಾಜ್(43), ಸೋದರ ಮಹಮ್ಮದ್ ಆಬಿದ್(43) ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಜಮೀರ್ ಎನ್ನುವಾತ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.
ಸದ್ಯ ಗಾಯಾಳುಗಳಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.