ಬಳ್ಳಾರಿ:- ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದಾರೆ. ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಅದೇ ಧರ್ಮದ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ .ಹಾವೇರಿಯ ಘಟನೆ ಮಾಸವ ಮುನ್ನವೇ ಬೀದರನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ.