ಬೆಂಗಳೂರು: ಹೊಟೇಲ್ ನುಗ್ಗಿ ಮಾಲೀಕನಿಗೆ ಮೂವರು ಚಾಕು ತೋರಿಸಿ ಬೆದರಿಸಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಹೊಟೇಲ್ ಗೆ ಪ್ರವೇಶಿಸಿದ್ದ ಮೂವರು ಅಪರಿಚಿತರು ಕ್ಷುಲ್ಲಕ ಕಾರಣಕ್ಕಾಗಿ ಹೊಟೇಲ್ ಮಾಲೀಕರೊಂದಿಗೆ ದುಂಡಾವರ್ತನೆ ತೋರಿದ್ದಾರೆ. ಕೆಲ ಕಾಲ ಮಾತಿನ ಚಕಮಕಿ ನಡೆಸಿದ್ದಾರೆ. ಬಳಿಕ ಪುಂಡನೋರ್ವ ಜೇಬಿನಿಂದ ಚಾಕು ತೋರಿಸಿ ಬೆದರಿಸಿದ್ದಾನೆ.
ಯಾವ ಕಾರಣಕ್ಕಾಗಿ ಬೆದರಿಕೆ ಹಾಕಿರುವ ಬಗ್ಗೆ ತಿಳಿದುಬಂದಿಲ್ಲ.. ಘಟನೆ ದೃಶ್ಯ ಹೊಟೇಲ್ ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಬಗ್ಗೆ ವಿಶಾಲ್ ಎಂಬುವರು ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ಮಾಡಿ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಪುಂಡರ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ. ಅಧಿಕೃತವಾಗಿ ದೂರು ಬಂದ ಬಳಿಕ ಪ್ರಕರಣ ದಾಖಲಿಸಿಕೊಂಡು ಅರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.