ನವದೆಹಲಿ: ಕೊನೆಗೂ ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections) ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ಧರ್ಮೇಂದ್ರ ಪ್ರಧಾನ್ (Dharmendra Pradhan) ಹಾಗೂ ಅರುಣ್ ಸಿಂಗ್ (Arun Singh) ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾರೆ.
ಮೊದಲ ಹಂತದಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದು, ಇನ್ನುಳಿದ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಾಕಿ ಉಳಿಸಿಕೊಂಡಿದೆ.
ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಆದ್ಯತೆ ನೀಡಿದೆ. ಅಲ್ಲದೇ, 8 ಮಂದಿ ಮಹಿಳೆಯರು, 5 ಮಂದಿ ವಕೀಲರು, 9 ಮಂದಿ ವೈದ್ಯರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರೊಂದಿಗೆ ಒಬ್ಬರು ನಿವೃತ್ತ ಐಎಎಸ್, ಒಬ್ಬರು ಐಪಿಎಸ್ ಅಧಿಕಾರಿಗೆ ಟಿಕೆಟ್ ಘೋಷಣೆ ಮಾಡಿದೆ.