ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಮಧ್ಯೆ ಅವರು ಕಾರ್ಯಕರ್ತರ ಸಭೆ ಕರೆದಿದ್ದಾರೆ.ಬೆಂಬಲಿಗರ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಸುಮಲತಾ ಅವು ಇಂದು ಬೆಂಗಳೂರಲ್ಲಿ ತಮ್ಮ ಆಪ್ತರ ಜೊತೆ ಹೈ ವೋಲ್ಟೇಜ್ ಸಭೆ ನಡೆಸಲಿದ್ದು ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಲಿದ್ದಾರೆ.
ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಒಪ್ಪಿದರೆ ಅವರು ಮಂಡ್ಯದಿಂದ ಜೆಡಿಎಸ್ ಕಣಕ್ಕಿಳಿಸುವ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರಾ, ಅಥವಾ ಅವರು ಈ ಹಿಂದೆ ಹೇಳುತ್ತಿದ್ದಂತೆ ಪಕ್ಷೇತರರಾಗಿ ಸ್ಪರ್ಧಿಸುತ್ತಾರಾ ಎಂಬ ಸಂದೇಹ ಮೂಡಿದೆ.ಇದಕ್ಕೆಲ್ಲಾ ಇಂದು ಉತ್ತರ ನೀಡಲಿದ್ದಾರೆ.