ಬೆಂಗಳೂರು: ನಿನ್ನೆ ಬೆಂಗಳೂರಿನಲ್ಲಿ 5 ಕಡೆ ಸರ್ಚ್ ಮಾಡಿದ್ದೇವೆ. ದೂರು ಬಂದವರ ಎಲ್ಲರ ಮನೆಗಳಲ್ಲಿ ನಿನ್ನೆ ಪರಿಶೀಲನೆ ಮಾಡಿದ್ದೇವೆ. ದಾಳಿ ವೇಳೆ ಪೆಂಡೆಂಟ್ ವಶಕ್ಕೆ ಪಡೆಯಲಾಗಿದೆ ಎಂದು ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ ಪುಷ್ಕರ್ ಹೇಳಿದ್ದಾರೆ.
ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನು ಉಲ್ಲಂಘನೆ. 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಉಲ್ಲಂಘನೆ ಆಗುತ್ತದೆ. ಹುಲಿ ಉಗುರು ಧರಿಸಿದವರ ವಿರುದ್ಧ ಈವರೆಗೆ 8 ದೂರು ಬಂದಿದೆ
ದಾಳಿ ಮಾಡಿ ಹುಲಿ ಉಗುರನ್ನ ವಶಕ್ಕೆ ಪಡೆದು ಕೊಳ್ಳಲಾಗಿದೆ ಆಮೇಲೆ ವಶಕ್ಕೆ ಪಡೆದ ಉಗುರನ್ನ FSLಗೆ ಕಳುಹಿಸಲಾಗಿದೆ
FSL ವರದಿ ಬಂದಮೇಲೆ ನಮಗೆ ಯಾವುದು ಹುಲಿಉಗುರು ಎನ್ನುವುದ ಖಾತರಿ ಆಗುತ್ತೆ ದರ್ಶನ್, ನಿಖಿಲ್ ಕುಮಾರಸ್ವಾಮಿ, ಜಗ್ಗೇಶ್,ರಾಕ್ ಲೈನ್ ವೆಂಕಟೇಶ್ ಮನೆಗೆ ಹೋಗಿ ವಿಚಾರಣೆ ಮಾಡಿದ್ದೇವೆ
ನಿಖಿಲ್, ದರ್ಶನ್ ಅವರಿಂದ ವಶಕ್ಕೆ ಪಡೆದ ಉಗುರು ಮೇಲ್ನೋಟಕ್ಕೆ ವರ್ಜಿನಲ್ ಅಲ್ಲಾ ಅಂತ ಅನಿಸ್ತಿದೆ ಜಗ್ಗೇಶ್ ಮನೆಯಲ್ಲಿ ಸಿಕ್ಕಿರುವುದು ತುಂಬಾ ಹಳೆಯದ್ದು ಅದನ್ನು ಕೂಡ ಪರಿಶೀಲಿಸಲಾಗ್ತಿದೆ ಉಗುರನ್ನ ಬದಲಾಯಿಸಿರುವ ಪ್ರಕರಣ ಕಂಡು ಬಂದರೆ ಸಾಕ್ಷಿ ನಾಶದಡಿ ಪ್ರಕರಣ ದಾಖಲಿಸುತ್ತೇವೆ