ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಕ್ ದಮ್ ಏಕ್ ದಮ್ ಎಂಬ ಸಿಂಗಿಂಗ್ ಮಸ್ತಿ 5 ಭಾಷೆಯಲ್ಲಿ ಅನಾವರಣಗೊಂಡಿದ್ದು, ಕನ್ನಡದಲ್ಲಿ ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ರವಿತೇಜ ಮತ್ತು ನೂಪುರ್ ಸನೋನ್ ಏಕ್ ದಮ್ ಏಕ್ ದಮ್ ಪೆಪ್ಪಿಯೆಸ್ಟ್ ಸಾಂಗ್ ಗೆ ಹೆಜ್ಜೆ ಹಾಕಿದ್ದು, ಜಿವಿ ಪ್ರಕಾಶ್ ಟ್ಯೂನ್ ಹಾಕಿದ್ದಾರೆ.
70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.
ಟೈಗರ್ ನಾಗೇಶ್ವರ್ ರಾವ್ ಅಕ್ಟೋಬರ್ 20ರಂದು ವಿಶ್ವಾದ್ಯಂತ ಬಾಕ್ಸಾಫೀಸ್ ಭೇಟೆಗಿಳಿಯಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ. ಕಾರ್ತಿಕೇಯ-2, ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಜ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ನಡಿ ಟೈಗರ್ ನಾಗೇಶ್ವರ್ ರಾವ್ ಚಿತ್ರ ನಿರ್ಮಿಸಿದ್ದಾರೆ. ವಂಶಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.