ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೇಲೆ ಹೈಕೋರ್ಟ್ ತನಿಖೆಗೆ ಆದೇಶ ಹಿನ್ನೆಲೆಯಲ್ಲಿ ಸಿಎಂ ಹುದ್ದೆಗೆ ರಾಜೀನಾಮೆ ನೀಡುವಂತೆ ನಿನ್ನೆಯಿಂದ ಆಗ್ರಹ ವ್ಯಕ್ತವಾಗಿದ್ದು ಹೀಗಾಗಿ ಇಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಸಿಎಂ ಮನೆ ಮುತ್ತಿಗೆ ಯತ್ನ ನಡೆಸಿದ್ದಾರೆ.
ಸಿಎಂ ಕಾವೇರಿ ನಿವಾಸ, ಕೃಷ್ಣಾಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರು ಈ ವೇಳೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಿಎಂ ಮನೆ ಮುತ್ತಿಗೆ ಯತ್ನ ನಡೆಸಿದ್ದು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಬಿಜೆಪಿ ಪ್ರತಿಭಟನೆ ಗೊತ್ತಗ್ತಿದ್ದಂತೆ ಫುಲ್ ಅಲರ್ಟ್ ಆದ ಪೊಲೀಸರು ಕುಮಾರ ಕೃಪಾ ಗೆಸ್ಟ್ ಹೌಸ್ ಬಳಿಯೇ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಯುವಮೋರ್ಚಾ ಕಾರ್ಯಕರ್ತರನ್ನು ಬಂಧಿಸಿ, ಸ್ಥಳದಿಂದ ಕರೆದೊಯ್ದ ಪೊಲೀಸರು