ನಮ್ಮ ದೇಶದ ರಕ್ಷ ಣಾ ಪಡೆಯಲ್ಲಿ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆ ಎಂಬ ಮೂರು ಪ್ರಮುಖ ವಿಭಾಗಗಳಿವೆ. ಇವು ಭಾರತದ ರಕ್ಷ ಣೆಗೆ ಕಟಿಬದ್ಧವಾಗಿ ನಿಂತಿವೆ. ಶತ್ರುಗಳ ಯಾವುದೇ ರೀತಿಯ ದಾಳಿಯನ್ನು ಎದುರಿಸಲು ಇವು ಸಮರ್ಥವಾಗಿವೆ. ಈ ಮೂರು ಸೇನಾಪಡೆಗಳ ಪೈಕಿ ವಾಯುಪಡೆಯು ಇಂದು ಅಂದರೆ ಅಕ್ಟೋಬರ್ 8 ರಂದು ಏರ್ ಫೋರ್ಸ್ ಡೇಯನ್ನು ಆಚರಿಸಿಕೊಳ್ಳುತ್ತಿದೆ
ಪ್ರತಿವರ್ಷವೂ ಈ ದಿನವನ್ನು ಇಂಡಿಯನ್ ಏರ್ ಫೋರ್ಸ್ ಡೇಯನ್ನಾಗಿ ಆಚರಿಸಲಾಗುತ್ತದೆ.
ಈ ದಿನದಂದು ವಾಯುಪಡೆಯ ಸೈನಿಕರು ಸಾಂಪ್ರದಾಯಿಕ ಕವಾಯತುಗಳನ್ನು ಪ್ರದರ್ಶಿಸುತ್ತಾರೆ ಮತ್ತು ಭಾರತದ ಯುದ್ಧ ವಿಮಾನಗಳ ಮತ್ತು ಹೆಲಿಕಾಪ್ಟರ್ಗಳ ಪ್ರದರ್ಶನವೂ ಈ ಸಂದರ್ಭದಲ್ಲಿ ನಡೆಯುತ್ತದೆ. ಈ ದಿನ ದೇಶ ಸೇವೆಯ ವೇಳೆಗೆ ಹುತಾತ್ಮರಾದ ವಾಯುಪಡೆಯ ಸೈನಿಕರನ್ನು ಸ್ಮರಿಸಿ ಅವರಿಗೆ ಗೌರವ ನೀಡುವ ಕಾರ್ಯಕ್ರಮಗಳು ನಡೆಯುತ್ತವೆ.
ಭಾರತೀಯ ವಾಯುಪಡೆಯನ್ನು ಯಾವಾಗ ಸ್ಥಾಪಿಸಲಾಯಿತು?
ಭಾರತೀಯ ವಾಯುಪಡೆಯನ್ನು ಅಕ್ಟೋಬರ್ 08, 1932 ರಲ್ಲಿ ಬ್ರಿಟಿಷ್ ಸಾಮ್ರಾಜ್ಯದ ಸಹಾಯಕ ವಾಯುಪಡೆಯಾಗಿ ಸ್ಥಾಪಿಸಲಾಯಿತು. ಆ ಸಮಯದಲ್ಲಿ ಭಾರತೀಯ ವಾಯುಪಡೆಯನ್ನು ರಾಯಲ್ ಇಂಡಿಯನ್ ಏರ್ ಫೋರ್ಸ್ ಎಂದು ಕರೆಯಲಾಗುತ್ತಿತ್ತು. ಆದರೆ 1950 ರಲ್ಲಿ ಭಾರತದ ಗಣರಾಜ್ಯದ ನಂತರ ಭಾರತದ ವಾಯುಸೇನೆಯ ರಾಯಲ್ ಎಂಬ ಪದವನ್ನು ತೆಗೆದು ಹಾಕಿ ಇಂಡಿಯನ್ ಏರ್ ಫೋರ್ಸ್ ಎಂದು ಕರೆಯಲಾಯಿತು.
1933ರಲ್ಲಿ ಕೇವಲ ಆರು ಅಧಿಕಾರಿಗಳು ಮತ್ತು 19 ಯೋಧರೊಂದಿಗೆ ಪ್ರಾರಂಭವಾದ ಭಾರತೀಯ ವಾಯುಪಡೆಯು ಇಂದು ವಿಶ್ವದ ನಾಲ್ಕನೇ ಪ್ರಬಲ ವಾಯುಸೇನೆಯಾಗಿ ಬೆಳೆದು ನಿಂತಿದೆ. 1932 ರಲ್ಲಿ ಭಾರತೀಯ ವಾಯುಸೇನೆಯನ್ನು ಸ್ಥಾಪಿಸಿದ ನೆನಪಿಗಾಗಿ ಮತ್ತು ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶರಕ್ಷಣೆಯಲ್ಲಿ ತೊಡಗಿರುವ ಫೈಟರ್ ಪೈಲೆಟ್ (ಯೋಧರಿಗೆ) ಗೌರವ ಸಲ್ಲಿಸಲು ಪ್ರತಿವರ್ಷ ಅಕ್ಟೋಬರ್ 08 ರಂದು ಭಾರತೀಯ ವಾಯುಪಡೆ ದಿನವನ್ನು ಆಚರಿಸಲಾಗುತ್ತದೆ.
ಭಾರತೀಯ ವಾಯುಪಡೆ ದಿನದ ಪ್ರಾಮುಖ್ಯತೆ:
ಭಾರತೀಯ ವಾಯುಪಡೆ ದಿನದ ಸ್ಮರಣಾರ್ಥವಾಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ದೇಶ ರಕ್ಷಣೆಯಲ್ಲಿ ತೊಡಗಿರುವ ಫೈಟರ್ ಪೈಲೆಟ್ಗಳನ್ನು ಗೌರವಿಸಲಾಗುತ್ತೆ. ಅಲ್ಲದೆ ಈ ದಿನ ಮಿಲಿಟರಿ ಶಕ್ತಿಯ ಪ್ರದರ್ಶನವನ್ನು ಮಾಡುವ ಮೂಲಕ ಹೊರಗಿನ ಪ್ರಂಚಕ್ಕೆ ವಿಶೇಷವಾಗಿ ಭಾರತದ ನೆರೆಹೊರೆಯ ರಾಷ್ಟ್ರಗಳಿಗೆ ಭಾರತೀಯ ಸೇನೆಯ ಶಕ್ತಿಯನ್ನು ಪ್ರದರ್ಶಿಸಲಾಗುತ್ತದೆ. ವಿಶೇಷವಾಗಿ ನಮ್ಮ ರಾಷ್ಟ್ರವನ್ನು ರಕ್ಷಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸಿರುವ ಭಾರತೀಯ ವಾಯುಸೇನೆಯ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಈ ವಿಶೇಷ ದಿನವನ್ನು ಪ್ರತಿವರ್ಷ ಆಚರಿಸಲಾಗುತ್ತದೆ.