ಬೆಂಗಳೂರು: ಇಂದು ಯು.ಎಸ್. ಇಂಡಿಯಾ ಬಿಸಿನೆಸ್ ಕೌನ್ಸಿಲ್ ನ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯನವರು ದುಂಡು ಮೇಜಿನ ಸಭೆ ನಡೆಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಯು.ಎಸ್. ಇಂಡಿಯಾ ಬಿಸಿನೆಸ್ ಕೌನ್ಸಿಲ್ ನ ಪ್ರತಿನಿಧಿಗಳೊಂದಿಗೆ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದರು.
ಈ ವೇಳೆ ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ಭಾಗಿಯಾಗಿದ್ರು.
ಹಾಗೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಐ.ಟಿ. ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಏಕ್ ರೂಪ್ ಕೌರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.