75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ ನೆರವೇರಿದೆ.
ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಿದರು.ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ಸಮಗ್ರತೆ, ಏಕತೆಯನ್ನ ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನ ಹೊಂದಿದೆ. ಸರ್ಕಾರವು 5 ಗ್ಯಾರೆಂಟಿಗಳನ್ನ ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಎಲ್ಲ ಐದು ಗ್ಯಾರೆಂಟಿಗಳನ್ನ ಅನುಷ್ಠಾನಗೊಳಿಸಲಾಗಿದೆ. ಶಕ್ತಿ & ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಮಾಸಿಕ ₹2,000 ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಭೀಕರ ಬರಗಾಲ ಹಿನ್ನೆಲೆ ಬರಪೀಡಿತ ತಾಲೂಕುಗಳನ್ನ ಘೋಷಿಸಲಾಗಿದೆ ಎಂದರು.
223 ತಾಲೂಕು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಪೈಕಿ 196 ತೀವ್ರ ಬರಪೀಡಿತ ತಾಲೂಕುಗಳಿವೆ. ರಾಜ್ಯ ಸರ್ಕಾರ NDRFನಿಂದ ಅನುದಾನ ಕೋರಿದೆ. ಪ್ರತಿ ರೈತನ ಖಾತೆಗೆ 2 ಸಾವಿರ ರೂ. ಪರಿಹಾರ ಹಾಕಲಾಗುತ್ತೆ. ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ. ಮನ್ರೇಗಾ ಯೋಜನೆಯಡಿ ಕೆಲಸ ಒದಗಿಸಲಾಗಿದೆ. 63.13 ಲಕ್ಷ ಜನರಿಗೆ ಕೆಲಸವನ್ನ ಒದಗಿಸಲಾಗಿದೆ. 72.38 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ರಾಜ್ಯದಲ್ಲಿರುವ ಡಯಾಲಿಸಿಸ್ ಕೇಂದ್ರಗಳ ವಿಸ್ತರಣೆ ಮಾಡಲಾಗಿದೆ. 168 ಇದ್ದ ಡಯಾಲಿಸಿಸ್ ಕೇಂದ್ರ 219ಕ್ಕೆ ಹೆಚ್ಚಳವಾಗಿದೆ. ಆರೋಗ್ಯ ಕವಚ ಯೋಜನೆಯಡಿ ಹೊಸದಾಗಿ 262 ಆ್ಯಂಬುಲೆನ್ಸ್ಗಳು ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯಪಾಲ ಗೆಹ್ಲೋಟ್ ಭಾಷಣದಲ್ಲಿ ತಿಳಿಸಿದರು.
ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಪರಿಹಾರ ಕೈಗೊಳ್ಳಲಾಗಿದೆ. ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಯೋಜನೆ ಮಾಡಲಾಗಿದೆ. ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಬೋಧನೆ, ಭಾರತ ಸಂವಿಧಾನ ಪೀಠಿಕೆ ಫೋಟೋ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಪ. ಜಾತಿಯ 69,190 ವಿದ್ಯಾರ್ಥಿಗಳಿಗೆ 133.82 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗಿದೆ. SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ರಾಜ್ಯಪಾಲ ಗೆಹ್ಲೋಟ್ ತಿಳಿಸಿದರು.