ಹೆಚ್ಐವಿ ಅಥವಾ ಏಡ್ಸ್ ವಿರುದ್ಧದ ಹೋರಾಟದಲ್ಲಿ ವಿಶ್ವವು ಸಾಧಿಸಿದ ಪ್ರಗತಿಯನ್ನು ಬಿಂಬಿಸಲು ಈ ದಿನವನ್ನು ವಿಶ್ವ ಏಡ್ಸ್ ದಿನ ಎಂದು ಆಚರಣೆ ಮಾಡಲಾಗುತ್ತದೆ.
ಹೌದು, ಏಡ್ಸ್ಯೆಂದರೆ ಸಾಕು ಎಲ್ಲಾರಿಗೂ ಭಯವಿತ್ತು ಅದೊಂದು ಗಂಭೀರ ಮತ್ತು ಗುಣಪಡಿಲಾಗದ ಕಾಯಿಲೆಯೆಂದು ಆತಂತದಲ್ಲಿ ಜನರು ಇದ್ದರೂ ಅಂದ್ರೆ ದಿನಕಳೆದಂತೆ ಅದರ ಬಗ್ಗೆ ಅರಿವು ಮತ್ತು ಜಾಗೃತಿಯನ್ನು ಜನರಿಗೆ ಮೂಡಿಸಿ ತಪ್ಪು ಕಲ್ಪನೆಯನ್ನ ಹೋಗಲಾಡಿಸಿದೆ.
ಏಡ್ಸ್ ಹೇಗೆ ಹರಡುತ್ತದೆ..?
ಹ್ಯೂಮನ್ ಇಮ್ಯೂನೊ ಡಿಫಿಷಿಯೆನ್ಸಿ ವೈರಸ್ (H.I.V) ನಿಂದ ಉಂಟಾಗುವ ಈ ರೋಗವು ಸೋಂಕಿತ ವ್ಯಕ್ತಿಯ ಜೀವಕ್ಕೆ ಮಾರಕವಾಗಿ ಪರಿಣಾಮಿಸಬಹುದು. ಈ ಕಾಯಿಲೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಈ ಕಾರಣದಿಂದ ಈ ವೈರಸ್ ದೇಹದಲ್ಲಿ ವೇಗವಾಗಿ ಹರಡಲು ಪ್ರಾರಂಭಿಸುತ್ತದೆ. ಆರಂಭಿಕ ಹಂತದಲ್ಲಿ ಚಿಕಿತ್ಸೆ ನೀಡದಿದ್ದರೆ, ಈ ಕಾಯಿಲೆ ಮಾರಣಾಂತಿಕವಾಗಿ ಪರಿಣಮಿಸುತ್ತದೆ.
ಅಸುರಕ್ಷಿತ ಲೈಂಗಿಕತೆ, ಸೋಂಕಿತ ರಕ್ತದ ವರ್ಗಾವಣೆಯ ಮೂಲಕ ಅಥವಾ ಸೋಂಕಿತ ವ್ಯಕ್ತಿಯ ಚುಚ್ಚು ಮದ್ದಿನ ಹಂಚಿಕೆಯ ಮೂಲಕ ಈ ಸೋಂಕು ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಹರಡಬಹುದು.
ಏಡ್ಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶ
ಒಂದು ರೋಗದ ಬಗ್ಗೆ ಹಲವು ತಪ್ಪು ಕಲ್ಪನೆಗಳಿವೆ. ಇಂದಿಗೂ ಈ ಕಾಯಿಲೆಯಿಂದ ಬಳಲುತ್ತಿರುವವರನ್ನು ಸಮಾಜದಲ್ಲಿ ಬಹಳ ಕೀಳರಿಮೆಯಿಂದ ನೋಡಲಾಗುತ್ತದೆ. ಹಾಗಾಗಿ ಏಡ್ಸ್ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು, ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಈ ರೋಗವನ್ನು ತಡೆಗಟ್ಟುವ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಏಡ್ಸ್ ದಿನದ ಇತಿಹಾಸ
ವಿಶ್ವ ಏಡ್ಸ್ ದಿನವನ್ನು ಮೊದಲ ಬಾರಿಗೆ 1988 ರಲ್ಲಿ ಆಚರಿಸಲಾಯಿತು. 1981 ರಲ್ಲಿ ಮೊದಲ ಏಡ್ಸ್ ಪ್ರಕರಣ ವರದಿಯಾದ ನಂತರ, ಸುಮಾರು 25 ಮಿಲಿಯನ್ ಜನರು ಈ ಕಾಯಿಲೆಗೆ ತುತ್ತಾಗಿ ಪ್ರಾಣವನ್ನು ಕಳೆದುಕೊಂಡರು. ಇಂತಹ ಪರಿಸ್ಥಿತಿಯಲ್ಲಿ ಈ ಗಂಭೀರ ಕಾಯಿಲೆಯ ಬಗ್ಗೆ ಜನರಿಗೆ ಶಿಕ್ಷಣ ನೀಡುವ ಅಗತ್ಯವಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆನ್ನುವ ಸಲುವಾಗಿ 1987 ರಲ್ಲಿ ಥಾಮಸ್ ನೆಟ್ಟರ್ ಮತ್ತು ಜೇಮ್ಸ್ ಡಬ್ಲ್ಯೂ ಬನ್ ಅವರು ಏಡ್ಸ್ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಜಾರಿಗೆ ತಂದರು. ಅದರ ಮಾರನೇ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಈ ದಿನವನ್ನು ವಿಶ್ವ ಮಟ್ಟದಲ್ಲಿ ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದ ಮೂಲಕ ಪ್ರತಿಯೊಂದು ದೇಶದ ಸರ್ಕಾರಗಳು ಈ ರೋಗದ ಹರಡುವಿಕೆ ಮತ್ತು ಅದರ ತಡೆಗಟ್ಟುವಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಅನೇಕ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.
ವಿಶ್ವ ಏಡ್ಸ್ ದಿನದ ಮಹತ್ವ
ಏಡ್ಸ್ ರೋಗದ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಈ ರೋಗಕ್ಕೆ ತುತ್ತಾದವರು ಸಮಾಜದಲ್ಲಿ ತಾರತಮ್ಯವಿಲ್ಲದೆ ಸುರಕ್ಷಿತ ಜೀವನ ನಡೆಸುವಂತಾಗಬೇಕು ಮತ್ತು ಈ ರೋಗದ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕೆಂದು ಈ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ. ಈ ದಿನ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಈ ಮೂಲಕ ಜನರಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ.