ಬೆಂಗಳೂರು: ರಾಜ್ಯ ಚುನಾವಣಾ ಪ್ರಚಾರ (Election Campaign) ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರ ಹಾಗೂ ಸಂಜೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.
ಮಹಿಳಾ ಮತದಾರರನ್ನ ಗಮನದಲ್ಲಿಟ್ಟುಕೊಂಡು ಪ್ರಿಯಾಂಕಾ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ (Priyanka Gandhi) ಮೂಲಕ ಮಹಿಳೆಯರಿಗೆ 2 ಸಾವಿರದ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿಸಲಾಗಿತ್ತು. ಈ ಬಾರಿಯೂ ಮಹಿಳಾ ಮತದಾರರ ಮನ ಗೆಲ್ಲಲು ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಕಾಂಗ್ರೆಸ್ ಮೊರೆ ಹೋಗಿದೆ ಎನ್ನಲಾಗಿದೆ.
ಎರಡು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದ ಸಂದರ್ಭದಲ್ಲಿ ಮಹಿಳಾ ಅಸ್ತ್ರ ಬಳಕೆ ಮೂಲಕ ಪ್ರಚಾರ ನಡೆಸಲಿದ್ದಾರೆ. ಗ್ಯಾರಂಟಿ ಜೊತೆಗೆ ಮಹಿಳಾ ಮತಗಳ ಗ್ಯಾರಂಟಿಗೆ ಪ್ರಿಯಾಂಕಾ ಮೂಲಕ ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಒಟ್ಟಾರೆ ಈ ಬಾರಿಯೂ ಮಹಿಳಾ ಮತ ಗ್ಯಾರಂಟಿಗಾಗಿ ಪ್ರಿಯಾಂಕಾ ಗಾಂಧಿ ಮೂಲಕ ಮಹಿಳಾ ಮತ ಭೇಟೆಗೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.