ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಉತ್ಸಾಹ ದಿಂದ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಸಮಯ ಸಾಗುತ್ತಾ ತಾಪಮಾನ ಹೆಚ್ಚಳವಾಗುವ ಹಿನ್ನೆಲೆ ಬೆಳಗ್ಗೆಯಿಂದಲೇ ನಾಗರೀಕರು ಬಂದು ಮತ ಹಾಕುತ್ತಿರುವ ದೃಶ್ಯಗಳು ಕಂಡುಬಂದಿವೆ. ಇದುವರೆಗೂ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶೇ.9.21ರಷ್ಟು ಮತದಾನವಾಗಿದೆ.
ಬೆಳಗ್ಗೆ 9.30ರ ವೇಳೆಗೆ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಮತದಾನ ಆಗಿದ್ದು, ಇದುವರೆಗೂ 14.33ರಷ್ಟು ಮತದಾನ ಆಗಿದೆ. ಕನಿಷ್ಠ ಪ್ರಮಾಣದ ಮತದಾನ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಆಗಿದ್ದು, ಇದುವರೆಗೂ ಶೇ.7.70 ರಷ್ಟು ವೋಟಿಂಗ್ ಆಗಿದೆ. ಒಟ್ಟು 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.9.21ರಷ್ಟು ಮತದಾನ ಆಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟಾಯ್ತು ಮತದಾನ?
- ಮಂಡ್ಯ ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ 7.70 ರಷ್ಟು ಮತದಾನವಾಗಿದೆ.
- ಹಾಸನದಲ್ಲಿ ಬೆಳಗ್ಗೆ 7 ರಿಂದ 9 ಗಂಟೆವರೆಗೆ ಶೇಕಡಾ 8.2ರಷ್ಟು ಮತದಾನವಾಗಿದೆ.
- ಚಿಕ್ಕಬಳ್ಳಾಪುರದಲ್ಲಿ ಮತದಾನ ಬೆಳಗ್ಗೆ 9 ಗಂಟೆಗೆ ಶೇ 8.70 ರಷ್ಟು ಮತದಾನವಾಗಿದೆ.
- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ 12.75ರಷ್ಟು ಮತದಾನವಾಗಿದೆ.