ರುವನಂತಪುರಂ: ಪ್ರವಾಸಿ ದೋಣಿ (Tourist Boat) ಮುಳುಗಿ ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ ಘಟನೆ ಕೇರಳದ (Kerala) ಮಲಪ್ಪುರಂನಲ್ಲಿ (Malappuram) ನಡೆದಿದೆ. ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ ವೇಳೆ ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಸಚಿವ ವಿ. ಅಬ್ದುರಹಿಮಾನ್ ಮಾಹಿತಿ ನೀಡಿದ್ದು, ಸಾವಿನ ಸಂಖ್ಯೆ ಈಗ 22ಕ್ಕೆ ಏರಿದೆ. 7 ಜನರ ಸ್ಥೀತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.