ಕೊಡಗು: ನಿರಂತರ ಮಳೆಯಿಂದಾಗಿ ಶಿರಾಡಿ, ಚಿಕ್ಕಮಗಳೂರು, ಚಾರ್ಮಾಡಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಸೇರಿ ವಿವಿಧೆಡೆ 10ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ ಸಂಭವಿಸಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಕೃಷ್ಣಾ ಹಾಗೂ ಅದರ ಹಲವು ಉಪನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ.
ಇದರ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೀಗಾಗಿ ಜಿಲ್ಲೆಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳು ಬುಧ ಮತ್ತು ಗುರುವಾರ ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.