ಕೆ.ಆರ್.ಪುರ: ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ನೀತಿಯನ್ನು ಖಂಡಿಸಿ ಭಾರತೀಯರ ಸೇವಾ ಸಮಿತಿ BSS ಮತ್ತು ಅಖಿಲ ಕರ್ನಾಟಕ ರೈತ ಮತ್ತು ವ್ಯಾಪಾರಿ ಸಂಘಟನೆಯಿಂದ ಜಂಟಿಯಾಗಿ ಪ್ರತಿಭಟನೆ ನಡೆಯಿತು.ಬೀದಿ ಬದಿ ವ್ಯಾಪಾರಿಗಳು ಕೆ.ಆರ್.ಪುರಂ ನಿಂದ ಫ್ರೀಡಂ ಪಾರ್ಕ್ ನತ್ತ ಜಾಥ ಹೊರಟಿದ್ದು, ಪ್ರತಿಭಟನಾಕಾರರು ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 20 ದಿನ ಗಳಿಂದ ರೈತರನ್ನು ಬೀದಿ ಬದಿ ವ್ಯಾಪಾರಿಗಳನ್ನ ಒಕ್ಕಲೆಬ್ಬಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂತೆ ಮಕ್ಕಳು ಮತ್ತು ಬಿಎಸ್ಎಸ್ ಸಂಘಟನೆಗಳು ಕೆ.ಆರ್.ಪುರದಿಂದ ಐಟಿಐ ವರೆಗೆ ವಿನೂತನವಾಗಿ ರೀತಿಯಲ್ಲಿ ಜಾಥ ಮಾಡಿದರು. ರಾಷ್ಟ್ರೀಯ ಹೆದ್ದಾರಿ ಯಲ್ಲೆ ನೂರಾರು ವ್ಯಾಪಾರಿಗಳು ಕುಳಿತುಕೊಂಡು ಸರ್ಕಾರದ ಧೋರಣೆಯನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ರೈತರ ಮತ್ತು ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ಎಲೆ ಶ್ರೀನಿವಾಸ್ ಅವರು ಬಿದಿಬದಿಯ ವ್ಯಾಪಾರಿಗಳನ್ನು ತೆರವು ಮಾಡುವುದರಿಂದ ನೂರಾರು ಕುಟುಂಬಗಳು ಬೀದಿಗೆ ಬೀಳಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೀದಿಬದಿಯ ವ್ಯಾಪಾರಿಗಳನ್ನು ಗುರುತಿಸಿ ಗುರುತಿನ ಚೀಟಿ ನೀಡಬೇಕು ಹಾಗೂ ನಿಗಮ ಮಂಡಳಿ ಸ್ಥಾಪಿಸಿ ಬೀದಿಬದಿ ವ್ಯಾಪಾರಿಗಳ ಹಿತಕಾಯುವ ಕಾರ್ಯ ಮಾಡಬೇಕೆಂದು ಆಗ್ರಹಿಸಿದರು. ಭಾರತೀಯ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಹೂಡಿ ರಾಮಚಂದ್ರ ಮಾತನಾಡಿ ಬೀದಿ ಬದಿ ವ್ಯಾಪಾರಿಗಳನ್ನ ವಕ್ಕಲೆಬ್ಬಿಸುವ ಪ್ರಸ್ತಾಪವನ್ನು ಈ ಕೂಡಲೇ ಕೈಬೀಡಬೇಕು ಇಲ್ಲವಾದಲ್ಲಿ ಆಗಸ್ಟ್14ರಂದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಬೀದಿ ವ್ಯಾಪಾರಿಗಳಿಗೆ ಪೊಲೀಸರು, ಅಧಿಕಾರಿಗಳು, ಜನ ಪ್ರತಿನಿಧಿಗಳು ಅಲ್ಲದೆ ಅಪಾರ್ಟ್ ಮೆಂಟ್ ನಿವಾಸಿಗಳು ಸಹ ತೊಂದರೆಗಳನ್ನ ನೀಡುತ್ತಿದ್ದಾರೆ ಇವೆಲ್ಲವೂ ನಿಲ್ಲಬೇಕು ಎಂದು ತಿಳಿಸಿದರು.ಬೀದಿ ಬದಿಯ ವ್ಯಾಪರಿಗಳನ್ನ ಒಕ್ಕಲೆಬ್ಬಿಸಿದ ಬ್ರಾಂಡ್ ಬೆಂಗಳೂರು ಆದೇಶ,ರದ್ದು ಪಡಿಸಬೇಕು ಬೀದಿ ಬದಿಯ ವ್ಯಾಪಾರಿಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡುವಂತೆ ಒತ್ತಾಯಿಸಿದರು. ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ ನೀಡುವ ಸೌಲಭ್ಯಗಳನ್ನು ಬೀದಿ ಬದಿಯ ವ್ಯಾಪಾರಿಗಳಿಗೂ ವಿಸ್ತರಣೆ ಮಾಡುವಂತೆ ಮನವಿ ಮಾಡಿದರು.