ಬೆಂಗಳೂರು:- ವಾಹನ ಸವಾರರು ಇದು ನೋಡಲೇಬೇಕಾದ ಸ್ಟೋರಿ. ಭಾನುವಾರ ಅಪ್ಪಿತಪ್ಪಿಯೂ ಈ ರಸ್ತೆಯಲ್ಲಿ ಸಂಚರಿಸಲು ಹೋಗ್ಬೇಡಿ. ಏಕೆಂದರೆ ಈ ರಸ್ತೆಗಳೆಲ್ಲಾ ಕ್ಲೋಸ್ ಆಗಲಿದೆ.
ರವಿವಾರ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಗಾ ದೇವಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಅಂದು ಮಧ್ಯಾಹ್ನ 12 ಗಂಟೆಯಿಂದ ಬೆಳಗ್ಗೆ 04:00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಸಂಚಾರ ನಿರ್ಬಂಧಿಸಿದ ರಸ್ತೆಗಳು
ಕೆನ್ಸಿಂಗ್ಟನ್ ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಎಂಇ.ಜಿ ಕಡೆಯಿಂದ ಕೆನ್ಸಿಂಗ್ಟನ್ ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.
ತಿರುವಳ್ಳವರ್ ಪ್ರತಿಮೆ ಜಂಕ್ಷನ್ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣ್ಣಸ್ವಾಮಿ ಮೊದಲಿಯರ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.
ಪರ್ಯಾಯ ಮಾರ್ಗ
ಕ್ಲಿಂಗ್ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ – ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್ಟನ್ನಿಂದ ಗುರುದ್ವಾರ ಜಂಕ್ಷನ್ಲ್ಲಿ ಬಲ ತಿರುವು ಪಡೆದು ಗಂಗಾಧರ ಚೆಟ್ಟಿ ರಸ್ತೆ – ಡಿಕನ್ಸನ್ ರಸ್ತೆಯಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ – ವೀಲರ್ ರಸ್ತೆ ಕಡೆಗೆ ಹೋಗಬಹುದಾಗಿದೆ.
ತಿರುವಳ್ಳವರ್ ಪ್ರೇಮ ಜಂಕ್ಷನ್ – ಅಣ್ಣಸ್ವಾಮಿ ಮೊದಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಶೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕನ್ಸನ್ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಲರ್ಸ್ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿದೆ.