ಬೆಂಗಳೂರು: ಹೆಬ್ಬಾಳದಲ್ಲಿರುವ ಪಶು ವೈದ್ಯಕೀಯ ಕಾಲೇಜು ಆವರಣದಲ್ಲಿ ಕರ್ನಾಟಕ ಪಶು ವೈದ್ಯಕೀಯ ಪರಿಷತ್ತು 2 ದಿನಗಳ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿತ್ತು.
ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ನಿರ್ದೇಶಕರಾದ ಡಾ.ಮಂಜುನಾಥ್ ಎಸ್.ಪಾಳೇಗಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ತರಬೇತಿಯಲ್ಲಿ ಕರ್ನಾಟಕದ ವಿವಿಧ ಕೃಷಿ-ಹವಾಮಾನ ಪ್ರದೇಶಗಳಿಗೆ ಅನುಗುಣವಾಗಿ ತಳಿ ಆಯ್ಕೆ.
ಕುರಿ ಮತ್ತು ಮೇಕೆಗಳ ರೋಗಗಳ ಬಗ್ಗೆ ರೈತರಿಗೆ ತರಬೇತಿ, ಪೌಷ್ಟಿಕ ಆಹಾರ ಮತ್ತು ಮೇವಿನ ಬಗ್ಗೆ ಮಾಹಿತಿ ಸೇರಿದಂತೆ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್ಗಳಿಂದ ಸಾಲ ಪಡೆಯುವ ವಿಧಾನದ ಬಗ್ಗೆ ತರಬೇತಿ ನೀಡಲಾಯಿತು.
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಶ್ರೀಮತಿ. ಸಲ್ಮಾ ಕೆ.ಫಾಹಿಮ್, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಆಯುಕ್ತರಾದ ಶ್ರೀಮತಿ ಅಶ್ವತಿ ಅವರು ಸೇರಿದಂತೆ ಡಾ.ಜೆ.ಆರ್.ಮಧುಸೂಧನ್,ಡಾ.ಬಿ.ಎನ್.ಮಂಜುನಾಥ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಾಗೂ ತರಬೇತಿಯಲ್ಲಿ ಭಾಗಿಯಾದವರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.