ಕೊಲ್ಕತ್ತಾ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ವಿಪಕ್ಷಗಳ ಮಹಾ ಮೈತ್ರಿಕೂಟ ಹಾಗೂ ತೃತೀಯ ರಂಗ ರಚನೆಯ ಮಾತುಗಳು ಕೇಳಿಬರುತ್ತಿವೆ. ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಗುರು ತಿಸಲು, ಸಜ್ಜುಗೊಳಿಸಲು ಮತ್ತು ಒಗ್ಗೂಡಿಸಲು ಹಾಗೂ ತನ್ನ ಸಿದ್ಧಾಂತವನ್ನು ಒಪ್ಪುವ ಜಾತ್ಯತೀತ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದರೆ, ಬಿಜೆಪಿ ಹಾಗೂ ಕಾಂಗ್ರೆಸ್ ಹೊರತಾದ ತೃತೀಯ ರಂಗ ರಚನೆಗೆ ಕೆಲವು ಪ್ರಾದೇಶಿಕ ಪಕ್ಷಗಳು ಪ್ರಯತ್ನ ಪಡುತ್ತಿವೆ.
ಈ ನಡುವೆ 2024ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದೆ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲ್ಪಸಂಖ್ಯಾತರಾಗಲಿ ಅಥವಾ ಬಹುಸಂಖ್ಯಾತರಾಗಲಿ ಎಲ್ಲರೂ ನಮ್ಮೊಂದಿಗೆ ಇದ್ದಾರೆ. ಎಲ್ಲರೂ ನಮಗೆ ಸಮಾನರು ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಗಾಗಿ ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಪ್ರಯತ್ನ ನಡೆಯುತ್ತಿದೆ.ವಾಸ್ತವವಾಗಿ, ಬ್ಯಾನರ್ಜಿ ಅವರು 2019 ರ ಚುನಾವಣೆಯ ಸಮಯದಲ್ಲಿ ವಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿದ್ದರು. ಆದರೆ ಅವರ ಪ್ರಯತ್ನ ಫಲ ನೀಡಲಿಲ್ಲ.