14 ವರ್ಷಗಳ ಬಳಿಕ ಮತ್ತೆ ಒಂದಾದ ತ್ರಿಷಾ –ವಿಜಯ್

ಚಲನಚಿತ್ರ

ತಮಿಳಿನ ಬೆಸ್ಟ್ ಆನ್ ಸ್ಕ್ರೀನ್ ಜೋಡಿಗಳಲ್ಲಿ ಒಂದಾದ ದಳಪತಿ ವಿಜಯ್ ಹಾಗೂ ತ್ರಿಷಾ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸತತ 14 ವರ್ಷಗಳ ಬಳಿಕ ಈ ಜೋಡಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದು ಸುದ್ದಿ ಕೇಳಿ ಫ್ಯಾನ್ಸ್ ಫುಲ್ ಥ್ರಿಲ್ ಆಗಿದ್ದಾರೆ.

ಗಿಲ್ಲಿ, ಕುರುವಿ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದ ವಿಜಯ್ ಮತ್ತು ತ್ರಿಷಾ ಮತ್ತೆ ಒಂದಾಗ್ತಿದ್ದಾರೆ. ಕಮಲ್ ಹಾಸನ್ ನಟನೆಯ `ವಿಕ್ರಮ್’ ಚಿತ್ರದ ನಿರ್ದೇಶಕ ಲೋಕೇಶ್ ಕನಗರಾಜ್ ವಿಜಯ್ ಮುಂದಿನ ಸಿನಿಮಾಗೆ ನಿರ್ದೇಶನ ಮಾಡ್ತಿದ್ದಾರೆ. ಈ ಚಿತ್ರಕ್ಕೆ ನಟಿ ತ್ರಿಷಾ ಅವರನ್ನೇ ನಾಯಕಿಯಾಗಿ ನಟಿಸಲು ಕೇಳಲಾಗಿದೆಯಂತೆ. ಸಿನಿಮಾದಲ್ಲಿ ನಟಿಸಲು ತ್ರಿಷಾ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಬ್ಯಾಕ್ ಟು ಬ್ಯಾಕ್ ನಾಲ್ಕು ಸಿನಿಮಾಗಳಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದರು. 14 ವರ್ಷಗಳ ನಂತರ ಮತ್ತೆ ನಿರ್ದೇಶಕರು ಇವರಿಬ್ಬರನ್ನ ಒಟ್ಟಾಗಿ ತೋರಿಸಲು ಹೊರಟಿದ್ದಾರೆ. ಈ ಮೂಲಕ ಸೂಪರ್ ಜೋಡಿ ಮತ್ತೆ ಒಂದಾಗ್ತಿದೆ. ಈ ಸುದ್ದಿ ಕೇಳಿ ವಿಜಯ್ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.