ತುಮಕೂರು : ರೈತನಿಗೆ ಚಾಕು ಇರಿದು ಹಣ ಮತ್ತು ಒಡವೆ ದೋಚಿರುವ ಘಟನೆ ನಡೆದಿದೆ. ಕಳೆದ ಬುಧವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತುಮಕೂರು ನಗರ ಹೊರವಲಯದ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ.
ಕಳೆದ ಬುಧವಾರ ರಾತ್ರಿ ರೈತ ಗಿರೀಶ್ ಮತ್ತು ಚೇತನ್ ಅರಸೀಕೆರೆಯಿಂದ ಬೆಂಗಳೂರಿಗೆ ವಾಹನದಲ್ಲಿ ಟೊಮೆಟೊ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಾತ್ರಿ ಸುಮಾರಿಗೆ 11.30ಕ್ಕೆ ನಿದ್ದೆದಂತಾಗಿ, ರಿಂಗ್ ರಸ್ತೆ ಬಳಿ ವಾಹನ ನಿಲ್ಲಿಸಿಕೊಂಡಿದ್ದರು.
ಈ ವೇಳೆ ಬೈಕ್ನಲ್ಲಿ ಬಂದ ಮೂವರು ಚಾಕು ತೋರಿಸಿ ಬೆದರಿಸಿದ್ದಾರೆ. ಹಣ ಕೊಡಲು ಒಪ್ಪದಿದ್ದಾಗ ಗಿರೀಶ್ ತೊಡೆಗೆ ಚಾಕುವಿನಿಂದ ಇರಿದು ವಾಚ್, ಚಿನ್ನದ ಸರ, 6 ಸಾವಿರ ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸದ್ಯ ರೈತ ಗಿರೀಶ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇರಿಸಿಕೊಂಡಿದ್ದಾರೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
