ಖಾಲಿ ಜಾಗದಲ್ಲಿ ಕಸ ಇಟ್ಟು ಹೋಗುತ್ತಿದ್ದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಕಿರುತೆರೆ ನಟ ಚರಿತ್ ಬಾಳಪ್ಪ ಅವರು ಅನ್ನಪೂರ್ಣೇಶ್ವರಿನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್ ಲೇಔಟಿನಲ್ಲಿ ವಾಸವಿರುವ ಚರಿತ್ ಫೆಬ್ರವರಿ 23ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶೂಟಿಂಗ್ ನಿಮಿತ್ತ ತೆರಳುವ ತರಾತುರಿಯಲ್ಲಿ ಮನೆಯ ಕಸವನ್ನ ಮನೆ ಪಕ್ಕದ ಖಾಲಿ ಜಾಗದಲ್ಲಿ ಇಟ್ಟಿದ್ದರು ಆಗ ಅದೇ ಏರಿಯಾದ ಅಪರಿಚಿತ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು ಈ ವೇಳೆ ಇಬ್ಬರ ನಡುವೆ ವಾಗ್ವಾದ ಶುರುವಾಗಿದ ಗಲಾಟೆ, ಈ ವೇಳೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ನನ್ನ ಕಿರು ಬೆರಳಿಗೆ ಗಾಯ ಮಾಡಿದ್ದಾರೆಂದು ನಟ ದೂರಿನಲ್ಲಿ ತಿಳಿಸಿದ್ದಾರೆ.