ಬರ್ತ್ ಡೇ ಪಾರ್ಟಿಗೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಬಳಿ ನಡೆದಿದೆ. ಶಶಿಕುಮಾರ್ (21) ಹಾಗೂ ಪ್ರಜ್ವಲ್(22) ಮೃತ ಬೈಕ್ ಸವಾರರು.
ಬೈಕ್ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತ ಇಬ್ಬರು ಯಾದಗಿರಿ ಜಿಲ್ಲೆಯ ಶಹಾಪುರ ಮೂಲದವರು ಎಂದು ಗುರುತಿಸಿಲಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಜೇವರ್ಗಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.