ಬೆಂಗಳೂರು:- ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಲೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಹೆಚ್ಚಿನ ಬದಲಾವಣೆ ಇಲ್ಲ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ಇರಲಿದೆ. ಬೀದರ್ನಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.