ಲಕ್ನೋ: ಮದುವೆ ಸಮಾರಂಭವೊಂದರಲ್ಲಿ (Marriage Party) ಇಬ್ಬರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಲಕ್ನೋದ ಬಿಜ್ನೋರ್ ಗ್ರಾಮದಲ್ಲಿ ನಡೆದಿದೆ. ಶೆರ್ಕೋಟ್ ಪೊಲೀಸ್ ಠಾಣಾ (Sherkot police station) ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ʻಬರಾತ್ʼ ಮದುವೆ ಪಾರ್ಟಿಗೆ ತೆರಳಿದ್ದ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದ್ದು, ಸಂತ್ರರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ನೋದ ಶೆರ್ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮದುವೆ ಪಾರ್ಟಿಯಲ್ಲಿ ಇಬ್ಬರು ಬಾಲಕಿಯರು ಡಿಜೆ ನುಡಿಸುವುದನ್ನ ಆನಂದಿಸುತ್ತಿದ್ದರು, ಇದ್ದಕ್ಕಿದ್ದಂತೆ ಕಣ್ಮರೆಯಾಗಿಬಿಟ್ಟರು. ತಕ್ಷಣ ಸ್ಥಳೀಯರೆಲ್ಲಾ ಬಾಲಕಿಯರನ್ನ ಹುಡುಕಲು ಪ್ರಾರಂಭಿಸಿದರು. ನಂತರ ಪಾರ್ಟಿ ನಡೆಯುತ್ತಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲೇ ಇದ್ದ ಕಾಡಿನಲ್ಲಿ ಅರೆಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತು. ಬಾಲಕಿಯರನ್ನು ಪತ್ತೆಹಚ್ಚಿದ ಪೊಲೀಸರು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ ನೀರಜ್ ಕುಮಾರ್ ಜದೌನ್, ಸಂತ್ರಸ್ತ ಬಾಲಕಿಯರಲ್ಲಿ ಒಬ್ಬರಿಗೆ 6 ವರ್ಷ ಮತ್ತೊಬ್ಬರಿಗೆ 5 ವರ್ಷ ತುಂಬಿದೆ. ಮಕ್ಕಳನ್ನು ಅವರ ಸಂಬಂಧಿಕನೊಬ್ಬ ಅಪಹರಿಸಿ ಅತ್ಯಾಚಾರವೆಸಗಿದ್ದಾನೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.