ಉತ್ತರ ಪ್ರದೇಶ:- ನಿರ್ಮಾಣ ಹಂತದ ಕಟ್ಟಡ ಕುಸಿತ ಹಿನ್ನೆಲೆ ಇಬ್ಬರು ಸಾವನ್ನಪ್ಪಿದ್ದು, 17 ಮಂದಿ ಗಂಭೀರವಾಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಜರುಗಿದೆ.
ಮಾರುಕಟ್ಟೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 19 ಕಾರ್ಮಿಕರನ್ನು ಹೊರತೆಗೆಯಲಾಯಿತು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾರುಕಟ್ಟೆ ಮಾಲೀಕ ಹಾಗೂ ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯನ್ನು ಗಮನಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಗೊಂಡ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ಅಪಘಾತದ ಬಗ್ಗೆ ಗಮನಹರಿಸಿದ್ದಾರೆ . ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಅವರು ಅಧಿಕಾರಿಗಳು ಮತ್ತು ರಕ್ಷಣಾ ತಂಡಕ್ಕೆ ಸೂಚನೆ ನೀಡಿದ್ದಾರೆ.