ತುಮಕೂರು: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಂಬದಹಳ್ಳಿ ಗೇಟ್ ಬಳಿ ನಡೆದಿದೆ. ಮೃತರನ್ನು ಹರ್ಷಿತ್ (24), ಪ್ರವೀಣ್ (20) ಎಂದು ಗುರುತಿಸಲಾಗಿದ್ದು,
ಮೃತರು ಹೊಳವನಹಳ್ಳಿ ಗ್ರಾಮದವರಾಗಿದ್ದು, ಗೋವಾಗೆ ತೆರಳಿ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.