ಬೆಂಗಳೂರು: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ 6 ಜನ ಗಂಭೀರ ಗಾಯಗೊಂಡವರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಕುಸಿದ ಸ್ಥಳದಲ್ಲಿ ಇದ್ದ 16ಕ್ಕೂ ಹೆಚ್ಚು ಕಾರ್ಮಿಕರು ಇದ್ದು ಅದರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದು ಬಂದಿದೆ.