ಭಿಲ್ವಾರಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯವು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಸಜೀವ ದಹನ ಮಾಡಿದ ಇಬ್ಬರಿಗೆ ಮರಣದಂಡನೆ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ದೇಹ ಸಂಪೂರ್ಣವಾಗಿ ಸುಟ್ಟುಹೋಗದ ಕಾರಣ ಬಳಿಕ ಅರೆಬೆಂದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕಾಲುವೆಗೆ ಎಸೆದಿದ್ದರು.
ತನಿಖೆ ಕೈಗೊಂಡ ಪೊಲೀಸರಿಗೆ ಕಾಲುವೆಯಲ್ಲಿ ತುಂಬಿದ ಗೋಣಿಚೀಲ ಸಿಕ್ಕಿತ್ತು, ಅದರೊಳಗೆ ದೇಹದ ಭಾಗಗಳಿದ್ದವು. ಕುಟುಂಬಸ್ಥರು ಈ ಇಬ್ಬರ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ಪೊಲೀಸರು ಆರೋಪಿಗಳಿಬ್ಬರನ್ನು ಹಿಡಿದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾರೆ.
ಬಾಲಕಿಯ ಮೇಲೆ ನಡೆಸಿದ ಅತ್ಯಾಚಾರ ಬಳಿಕ ಹೇಗೆ ಕೊಂದಿದ್ದಾರೆ ಎಂಬುದನ್ನು ವಿವರಿಸಿದ್ದಾರೆ. ಎರಡು ದಿನಗಳ ಹಿಂದೆ ಇಬ್ಬರೂ ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿತ್ತು. ನಿನ್ನೆ ಇಬ್ಬರಿಗೂ ಮರಣದಂಡನೆ ವಿಧಿಸಲಾಗಿದೆ