ಉಡುಪಿ: ಸ್ಯಾಂಡಲ್ವುಡ್ ನಟ ಉಪೇಂದ್ರ ಆ್ಯಕ್ಷನ್ ಕಟ್ ಹೇಳಿರುವ ʼಯುಐʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಅದರಲ್ಲಿಯೂ ಹಲವು ಗಮನ ಸೆಳೆಯುವ ಅಂಶಗಳಿಗೆ ಎನ್ನುವ ಸೂಚನೆ ಈಗಾಗಲೇ ಸಿಕ್ಕಿದೆ.
ಟೀಸರ್, ಹಾಡುಗಳಿಂದಲೇ ಸಿನಿಪ್ರಿಯರನ್ನು ಆಕರ್ಷಿಸಿದ ʼಯುಐʼ ಚಿತ್ರದ ವಾರ್ನರ್ ಹೆಸರಿನ ಹೊಚ್ಚ ಹೊಸ ವಿಡಿಯೊ ರಿಲೀಸ್ ಆಗಿದೆ.
ಇದರ ಬೆನ್ನಲ್ಲೇ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ. ‘ಯುಐ’ ವಾರ್ನರ್ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ.
ಸಿನಿಮಾ ರಿಲೀಸ್ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ.