ಹಾಸನ: ಸಾಲಭಾದೆ ತಾಳಲಾರದೆ ಗಂಡ-ಹೆಂಡತಿ ಹಾಗೂ ಪುತ್ರಿ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಸಾವನ್ನಪ್ಪಿದ ದುರ್ದೈವಿಗಳು, ಶ್ರೀನಿವಾಸ್ ಕಾರು ಚಾಲಕನಾಗಿದ್ದರು, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು.
ಶ್ರೀನಿವಾಸ್ ಸಾಕಷ್ಟು ಸಾಲ ಮಾಡಿಕೊಂಡಿದ್ದರು.
ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಸ್ಮೀತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.