ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್(Nirmala Sitharaman) ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯು ಮೂರ್ಖತನಕ್ಕೆ ನಿದರ್ಶನವಾಗಿದೆ. ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ತೀವ್ರವಾಗಿ ಕಿಡಿಕಾರಿದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಯುವ ಘಟಕವಾದ ಬಜರಂಗದಳದ ಮೇಲೆ ನಿಷೇಧ ಹೇರುವ ಭರವಸೆ ನೀಡಿರುವುದು ಮೂರ್ಖತನಕ್ಕೆ ನಿದರ್ಶನವಾಗಿದೆ.
ನಾವು ಯಾವಾಗಲೂ ಬಜರಂಗ ಬಲಿಯನ್ನು ಗೌರವಿಸುತ್ತೇವೆ ಮತ್ತು ಹನುಮಾನ್ ಚಾಲೀಸಾವನ್ನು ಓದುತ್ತೇವೆ. ಆದರೆ, ಕಾಂಗ್ರೆಸ್ಸಿಗೆ ಇದು ಚುನಾವಣಾ ವಿಷಯವಾಗಿದೆ. ಕರ್ನಾಟಕವು ಹನುಮಂತನ ಜನ್ಮಸ್ಥಳವಾಗಿದೆ. ಕಾಂಗ್ರೆಸ್ ನಾಯಕರು ಅಲ್ಲಿ, ಇಲ್ಲಿ ಹೇಳಿಕೆ ನೀಡುತ್ತಿಲ್ಲ, ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳುತ್ತಿದೆ. ಇದು ಮೂರ್ಖತನಕ್ಕೆ ನಿದರ್ಶನವಾಗಿದೆ ಎಂದು ಹೇಳಿದ್ದಾರೆ.