ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಈ ಮಧ್ಯೆಯೇ ಕುರುಡು ಕಾಂಚಾಣದ ಕುಣಿತ ಜೋರಾಗಿಯೇ ನಡೆಯುತ್ತಿದೆ. ಅದರ ಭಾಗವಾಗಿ ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೆ.ಜಿ ಚಿನ್ನದ ಜೊತೆಗೆ 46 ಕೆ.ಜಿ ಬೆಳ್ಳಿಯನ್ನ ವಿವೇಕ್ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಂದಾಜು 5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿ, ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಈಚರ್ ವಾಹದಲ್ಲಿ ಇದನ್ನ ಸಾಗಿಸಲಾಗುತ್ತಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲಿಸರು ಚಿನ್ನ ಬೆಳ್ಳಿ ಸಮೇತ ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ವಿವೇಕ್ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸರಿಂದ ತನಿಖೆ ಮುಂದುವರಿದಿದೆ.