ಬೆಂಗಳೂರು: ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ (UPSC Preliminary Exam) ಇರುವ ಕಾರಣ ಮೇ 28ರ ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ತಿಳಿಸಿದೆ. ಯುಪಿಎಸ್ಸಿ ಪರೀಕ್ಷೆ ಕಾರಣ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆ ದಿನ ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ,
ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್ಫೀಲ್ಡ್ಗಳಿಂದ (ಕಾಡುಗೋಡಿ) ಮೆಟ್ರೋ ರೈಲು ಸೇವೆಗಳು 6 ಗಂಟೆಗೆ ಪ್ರಾರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ತಿಳಿಸಿದೆ.ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.ಪ್ರತಿ ಭಾನುವಾರ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚಾರ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತದೆ. ಉಳಿದಂತೆ ವಾರದ ದಿನಗಳಲ್ಲಿ ಸೋಮವಾರದಿಂದ ಶನಿವಾರದ ವರೆಗೆ ಬೆಳಗ್ಗೆ 5 ಗಂಟೆಗೇ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತದೆ.