ಹಷ್ ಮನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ದೋಷಿ ಎಂದು ನ್ಯೂಯಾರ್ಕ್ ನ್ಯಾಯಾಲಯ ಘೋಷಿಸಿದೆ. ಈ ಮೂಲಕ ಅಪರಾಧ ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾದ ಮೊದಲ ಅಮೆರಿಕ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಟ್ರಂಪ್ ಒಳಗಾಗಿದ್ದಾರೆ.
ಪ್ರಕರಣದಲ್ಲಿ ಎಲ್ಲಾ 34 ಆರೋಪಗಳಲ್ಲಿಯೂ ಟ್ರಂಪ್ ದೋಷಿ ಎಂದು ನ್ಯೂಯಾರ್ಕ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಜಾಮೀನು ಇಲ್ಲದೇ ಬಿಡುಗಡೆಯಾಗಿದ್ದ ಟ್ರಂಪ್ ಇದೀಗ ಅಪರಾಧಿಯಾಗಿದ್ದಾರೆ.
ಅಮೆರಿಕದ ಇತಿಹಾಸದಲ್ಲಿ ಹಿಂದೆಂದೂ ಹೀಗಾಗಿರಲಿಲ್ಲ. ಡೊನಾಲ್ಡ್ ಟ್ರಂಪ್ ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ಸ್ಗೆ ತನ್ನ ರಾಜಮನೆತನದ ವಕೀಲ ಕೊಹೆನ್ ಮೂಲಕ ಹಣವನ್ನು ಒದಗಿಸಿದ್ದಾರೆ ಎಂದು ಆರೋಪಿಸಿದ್ದಾರೆ, ಆದ್ದರಿಂದ ಅಕೆ ತನ್ನ ರಹಸ್ಯಗಳನ್ನು ಬಹಿರಂಗಪಡಿಸುವುದಿಲ್ಲ. ಅವರು ಮೊದಲ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೊದಲೇ ಈ ಪ್ರಕರಣ ದಾಖಲಾಗಿತ್ತು.
ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಮೀಪಿಸುತ್ತಿದ್ದು, ರಿಪಬ್ಲಿಕನ್ ಪಕ್ಷದ ನಾಯಕ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಏರಬಹುದು ಎನ್ನಲಾಗಿತ್ತು. ಈ ಸಂದರ್ಭದಲ್ಲಿ ಪ್ರಕರಣವೊಂದರಲ್ಲಿ ದೋಷಿಯಾಗಿದ್ದಾರೆ. ‘ನಾನು ತುಂಬಾ ಮುಗ್ಧ ಮನುಷ್ಯ. ನಿಜವಾದ ತೀರ್ಪು ಮತದಾರರಿಂದ ಬರಲಿದೆ’ ಎಂದು ಟ್ರಂಪ್ ಪ್ರತಿಕ್ರಿಯಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರು ನಟಿ ಸ್ಟಾರ್ಮಿ ಡೇನಿಯಲ್ಸ್ಗೆ ಹಣ ಪಾವತಿಸಿದ ಆರೋಪಕ್ಕೆ ಸಂಬಂಧಿಸಿ ‘ಹಷ್ ಮನಿ’ ಪ್ರಕರಣದಲ್ಲಿ ಕಾನೂನು ಸಂಕಷ್ಟ ಎದುರಿಸುತ್ತಿದ್ದರು. ಗೌಪ್ಯತೆ ಕಾಪಾಡಲು ನೀಡಿದ ಹಣಕ್ಕೆ ಹಷ್ ಮನಿ ಎನ್ನಲಾಗುತ್ತದೆ.