ಅಮೆರಿಕದ ವಾಷಿಂಗ್ಟನ್ ನಗರದ ಬಳಿ ವೆಸ್ಟ್ ರಿಚ್ಲಂಡ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು ಘಟನೆಯಲ್ಲಿ ಮಹಿಳೆಯೊಬ್ಬಳು ಮೃತಪಟ್ಟಿದ್ದು ಆರೋಪಿ ಪರಾರಿಯಾಗಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ.
ಸಂಜೆ ಶಾಲೆಯಿಂದ ಮಕ್ಕಳು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶಾಲೆಯ ಕಂಪೌಂಡ್ ಪ್ರವೇಶಿಸಿದ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಗುಂಡೇಟಿನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು ಆಕೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿಲ್ಲ.
ಗುಂಡು ಹಾರಿದ ಬಳಿಕ ಶಾಲೆಯ ಕ್ಯಾಂಪಸ್ ಅನ್ನು ಮುಚ್ಚಲಾಗಿದ್ದು ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ. ಪರಾರಿಯಾಗಿರುವ ಆರೋಪಿ ಮಾಹಿತಿ ಲಭಿಸಿದ್ದು ಆತನ ಮನೆಯನ್ನೂ ಸೀಲ್ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.