ಹೈದರಾಬಾದ್: ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ಲ್ಯಾಬ್ ವರದಿ ದೃಢಪಡಿಸಿದೆ.
ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಸಮಿತಿಯನ್ನು ದೇವಸ್ಥಾನದ ಆಡಳಿತ ಸ್ಥಾಪಿಸಿದೆ.
ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರ ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ್ದರು.
ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ಗುರುವಾರ ತಿಳಿಸಿದ್ದಾರೆ.