ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್ನನ್ನು ಎನ್ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಇತ್ತೀಚೆಗೆ ಅಲಿ ಅಬ್ಬಾಸ್ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ದಿನ ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಲಾಗಿತ್ತು. ಇದಾದ ಬಳಿಕ ದಾಖಲೆಗಳ ಪರಿಶೀಲನೆ ನಡೆಸಿ ಮತ್ತಷ್ಟು ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದಿದ್ದರು. ಸದ್ಯ ಈಗ ಅಬ್ಬಾಸ್ ಅಲಿಯನ್ನ ಬಂಧಿಸಿ ತೀವ್ರ ವಿಚಾರಣೆ ನಡೆಸ್ತಿದ್ದಾರೆ.
ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ವಾಸವಾಗಿದ್ದ ಅಲಿ ಅಬ್ಬಾಸ್ ಪೇಟಿವಾಲ ಎಂಬಾತನ ಮನೆಯ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ತೀವ್ರ ಶೋಧ ನಡೆಸಿದ್ದರು. ಬಳಿಕ ಮರುದಿನ ಮತ್ತೆ ಅಬ್ಬಾಸ್ ಮನೆಯ ಮೇಲೆ ದಾಳಿ ಮಾಡಿ ಪರಿಶೀಲಿಸಿ 16,42,000 ಹಣ ಸೀಜ್ ಮಾಡಿದ್ದರು. ಮೊಬೈಲ್, ಲ್ಯಾಪ್ಟಾಪ್ ಪರಿಶೀಲನೆ ನಡೆಸಿ ಐಸಿಸ್ ಶಂಕಿತ ಉಗ್ರ ಅಬ್ಬಾಸ್ನನ್ನ ವಶಕ್ಕೆ ಪಡೆದಿದ್ದರು. ಬಳಿಕ ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದರು. ನಂತರ ದಾಖಲೆಗಳ ಪರಿಶೀಲನೆ ನಡೆಸಿ ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಸದ್ಯ ಈಗ ಅರೆಸ್ಟ್ ಮಾಡಲಾಗಿದೆ.